ಹೊಸದಿಗಂತ ಡಿಜಿಟಲ್ ಡೆಸ್ಕ್ :
ರೈತರ ಮಕ್ಕಳ ಮದುವೆಯಾಗಲು ವಧುಗಳು ಹಿಂದೇಟು ಹಾಕುತ್ತಿದ್ದಾರೆ ಎನ್ನುವ ಮಾತಿದೆ. ಈ ಹಿನ್ನೆಲೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಭರ್ಜರಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ. ಅನುದಾನ ನೀಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ಇಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಅವರ ನೇತೃತ್ವದಲ್ಲಿ ಶಿನಿಗೇನಹಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಹಳ್ಳಿಯ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡಲ್ಲ. ಹಾಗಾಗಿ ರೈತ ಕುಟುಂಬದ ಮಕ್ಕಳ ಜೊತೆ ಮದುವೆಯಾಗುವ ಹೆಣ್ಣು ಮಕ್ಕಳಿಗೆ 2 ಲಕ್ಷ ರೂ. ಅನ್ನು ನೀಡ್ತೇವೆ ಎಂದು ಭರವಸೆ ನೀಡಿದ್ದಾರೆ. ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿರುವ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತೇವೆ ಎಂದು ಕೂಡ ಭರವಸೆ ನೀಡಿದರು.