ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಕರಿಯ ಎಂದು ಸಂಬೋಧಿಸಿದ್ದಕ್ಕೆ ಕಾಂಗ್ರೆಸ್ ಶಾಸಕ, ಸಚಿವ ಜಮೀರ್ ಅಹ್ಮದ್ ಕ್ಷಮೆಯಾಚಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮುಖಂಡರಿಗೆ ನೋವಾಗಿದ್ದರೇ ಕ್ಷಮೆ ಕೇಳುತ್ತೇನೆ. ನಾನು ಮೊದಲಿನಿಂದಲೂ ಕುಮಾರಸ್ವಾಮಿ ಅವರನ್ನ ಕರಿಯಣ್ಣ ಅಂತಿದ್ದೆ. ನನ್ನನ್ನ ಕುಳ್ಳ ಅಂತಿದ್ದರು. ಈ ಹೇಳಿಕೆಯಿಂದ ಉಪಚುನಾವಣೆಯಲ್ಲಿ ಯಾವುದೇ ಎಫೆಕ್ಟ್ ಆಗಲ್ಲ ಹೇಳಿದರು.
ದೇವೇಗೌಡರ ಕುಟುಂಬ ಕೊಂಡುಕೊಳ್ಳುತ್ತೇನೆ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಾರಾದರೂ ದೇವೇಗೌಡರ ಕುಟುಂಬ ಕೊಂದುಕೊಳ್ಳಲು ಸಾಧ್ಯವಾ? ನನಗೆ ದೇವೇಗೌಡರ ಮೇಲೆ ಬಹಳ ಗೌರವವಿದೆ. ಈ ಹಿಂದೆ ಚುನಾವಣೆಯಲ್ಲಿ ಹೆಚ್‌ಡಿ ಕುಮಾರಸ್ವಾಮಿ ಮುಸ್ಲಿಂ ಮತಗಳು ಬೇಡ ಎಂದಿದ್ದರು. ಈಗ ದುಡ್ಡು ಕೊಟ್ಟು ಖರೀದಿಸಲು ಮುಂದಾಗಿದ್ದಾರೆ. ಅದನ್ನು ಉಲ್ಲೇಖಸಿ ನಾನು ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.