Thursday, February 2, 2023

Latest Posts

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ: ಹರಕೆಯ ಕುರಿಯಾಗಲಿದ್ದಾರೆಂದು ಹೆಚ್‌ಡಿಕೆ ಕುಟುಕು

ಹೊಸದಿಗಂತ ವರದಿ ಕಲಬುರಗಿ:

ಕೋಲಾರ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಸೇಫ್ ಕ್ಷೇತ್ರವಲ್ಲ. ಹೀಗಾಗಿ ಒಂದು ವೇಳೆ ಅವರು ಅಲ್ಲಿಂದ ಸ್ಪರ್ಧೆ ಮಾಡಿದರೆ, ಹರಕೆಯ ಕುರಿಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕುಟುಕಿದ್ದಾರೆ.

ಶುಕ್ರವಾರ ಜಿಲ್ಲೆಯ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ನಿಲ್ಲುವಂತೆ ಯಾರು ಒತ್ತಡ ಹಾಕಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಕೋಲಾರದಲ್ಲಿ ನಿಲ್ಲಿಸುವ ಮೂಲಕ ಅವರ ಪಕ್ಷದವರೆ ಅವರನ್ನು ಹರಕೆಯ ಕುರಿ ಮಾಡಲು ಹೊರಟಿದ್ದಾರೆ ಎಂದರು.

ನಾನು ಸ್ವತಃ ಕೋಲಾರದಲ್ಲಿ ಸುತ್ತಾಡಿ, ಅಲ್ಲಿಯ ಜನರ ಭಾವನೆ ಅರಿತುಕೊಂಡಿದ್ದೇನೆ. ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಲಿ ಅಥವಾ ನಾಯಕರಿಗಾಗಲಿ ಮತ ಪಡೆಯುವ ಶಕ್ತಿ ಇಲ್ಲ. ಸಿದ್ದರಾಮಯ್ಯ ಅವರನ್ನು ಬಲವಂತವಾಗಿ ನಿಲ್ಲಿಸಲು ಹೊರಟಿದ್ದಾರೆ ಎಂದರು.

3rd ಮೀಸಲಾತಿ 2d ಗೆ ಸೇಪ೯ಡೆಗೆ ಹೈಕೋರ್ಟ್ ತಡೆ ವಿಚಾರವಾಗಿ ಮಾತನಾಡಿದ ಅವರು, 3ಬಿಯನ್ನು 2ಡಿಗೆ ಘೋಷಣೆ ಮಾಡಿ ರಂಗ ಎನ್ನುವ ಹೆಸರು ಮಂಗ ಮಾಡಿದ್ದಾರೆ. ಇವರು ಮೂಗಿಗೆ ತುಪ್ಪ ಸವರಿಲ್ಲ. ಬದಲಾಗಿ, ಹಣೆ ಮೇಲೆ ಸುರಿದ ವಾಸನೆ ಸಹ ಬಾರದಂತೆ ಮಾಡಿದ್ದಾರೆ ಎಂದ ಅವರು, ಮೀಸಲಾತಿ ವಿಚಾರದಲ್ಲಿ ರಾಜ್ಯ ಸಕಾ೯ರ ಮೋಸ ಮಾಡಿದೆ ಎಂದರು.

ರಾಜ್ಯಕ್ಕೆ ನರೇಂದ್ರ ಮೋದಿ ಬಂದಿರುವುದಕ್ಕೆ ಕಾಂಗ್ರೆಸ್, ಜೆಡಿಎಸ್ಗೆ ಭಯ ಶುರುವಾಗಿದೆ ಎಂಬ ಸಿಪಿ ಯೋಗೇಶ್ವರ ಹೇಳಿಕೆ ಪ್ರತಿಕ್ರಿಯೆ ನೀಡಿ, ನರೇಂದ್ರ ಮೋದಿ ಬಂದರೆ ನಮಗ್ಯಾವ ಭಯವು ಇಲ್ಲ. ರಾಜ್ಯ ಸಕಾ೯ರವಾಗಲಿ, ಕೇಂದ್ರ ಸರ್ಕಾರ ಆಗಲಿ ಯಾವ ಯೋಜನೆಗಳನ್ನು ಜನರಿಗೆ ಕೊಟ್ಟಿದ್ದಿರಾ ಎಂಬುದರ ಬಗ್ಗೆ ನಿಮಗೆ ಭಯವಾಗಬೇಕು ಎಂದರು.

ಹುಬ್ಬಳ್ಳಿಯಲ್ಲಿ ಸ್ವಾಮಿ ವಿವೇಕಾನಂದರ ಕಾಯ೯ಕ್ರಮ ಮಾಡಿ, ಅವರ ಭಾವಚಿತ್ರವನ್ನೆ ಬಳಸಿಲ್ಲ ಎಂದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಬಿಜೆಪಿ ಪಾಲಿಗೆ ಇದು ಕೊನೆಯ ಚುನಾವಣೆ ಆಗಲಿದೆ ಎಂದು ನುಡಿದರು.

ಭಾರತ ಜೋಡೋ ಸಮಾರೋಪ ಸಮಾರಂಭದ ಪ್ರಯುಕ್ತ ದೆಹಲಿಯಲ್ಲಿ ಕಾಯ೯ಕ್ರಮಕ್ಕೆ ಸವ೯ಪಕ್ಷ ಭಾಗಿಯಾಗಲು ಖಗೆ೯ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು, ನಮಗೆ ಯಾವುದೇ ಪತ್ರ ಬಂದಿಲ್ಲ. ನನಗೆ ಜನರ ಕಷ್ಟ ಸುಖ ನೋಡುವುದಿದೆ. ಅದಕ್ಕಾಗಿ ಪೂವ೯ನಿಯೋಜಿತ ಕಾಯ೯ಕ್ರಮಗಳಿದ್ದು, ಆವರು ಕರೆದರೂ ನಾವು ಹೋಗುವ ಪರಿಸ್ಥಿತಿಯಲ್ಲಿ ಇಲ್ಲ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!