ಪಟಾಕಿ ಗೋಡೌನ್‌ನಲ್ಲಿ ಬೆಂಕಿ ಅವಘಡಕ್ಕೆ ಹೆಚ್‌ಡಿಕೆ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅತ್ತಿಬೆಲೆಯ ಪಟಾಕಿ ಗೋಡೌನ್‌ನಲ್ಲಿ ಅಗ್ನಿ ದುರಂತ ಸಂಭವಿಸಿದ ಪರಿಣಾಮ 14 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ʼಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತ ಸಾವು ಕಂಡಿರುವ ಘಟನೆಯ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆʼ ಎಂದು ಹೇಳಿದ್ದಾರೆ.

ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ.

ಜೀವ ಕಳೆದುಕೊಂಡ ಎಲ್ಲಾ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ.

ಈ ಬಗ್ಗೆ ರಾಜ್ಯ ಸರಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು.

ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರಕಾರ ಆಸರೆಯಾಗಿ ನಿಲ್ಲಬೇಕು ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!