ಪ್ರಧಾನಿ ಮೋದಿ ಒಪ್ಪಿಗೆ ಕೊಟ್ಟರೆ ಮಂಡ್ಯದಿಂದ ಹೆಚ್‌.ಡಿ.ಕೆ ಸ್ಪರ್ಧೆ: ಹೆಚ್.ಡಿ.ದೇವೇಗೌಡ

ಹೊಸದಿಂಗತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಗೆ ರಾಷ್ಟ್ರೀಯ ಪಕ್ಷಗಳು ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಉತ್ಸುಕರಾಗಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿ ಕೂಟದಿಂದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಕಾಂಗ್ರೆಸ್ ಹಾಗೂ ಬಿಜೆಪಿ, ಜೆಡಿಎಸ್ ಮೈತ್ರಿ ಕೂಟದ ಸಚಿವರು ಹಾಗೂ ಶಾಸಕರನ್ನು ಕಣಕ್ಕಿಳಿಸಲು ಯೋಜನೆ ಹಾಕಿದ್ದಾರೆ. ಈಗ ಮಂಡ್ಯ ಕ್ಷೇತ್ರದಲ್ಲಿ ಯಾರು ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಉಂಟಾಗಿದೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಸ್ಪರ್ಧಿಸುವ ಬಗ್ಗೆ ಹಿರಿಯ ನಾಯಕರು ಹಾಗೂ ಕಾರ್ಯಕರ್ತರಿಂದ ಒತ್ತಡ ಕೇಳಿಬರುತ್ತಿದೆ. ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್ ಕೊಟ್ಟರೆ, ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸುತ್ತಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!