ಮಂಡ್ಯ ಲೋಕಸಭೆಯಿಂದ ಹೆಚ್.ಡಿ.ಕೆ ಸ್ಪರ್ಧೆ ಖಚಿತ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆಗೆ ಸಿದ್ಧತೆ ಮುಂದುವರಿದಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಭದ್ರವಾಗಿದೆ. ಇದಲ್ಲದೆ, ಸೀಟು ಹಂಚಿಕೆ ಕುರಿತು ಈಗಾಗಲೇ ಹಲವಾರು ಸುತ್ತಿನ ಚರ್ಚೆಗಳು ನಡೆದಿದ್ದು, ಈಗ ಜೆಡಿಎಸ್‌ಗೆ ಮೂರು ಸ್ಥಾನಗಳನ್ನು ಹಂಚಿಕೆ ಮಾಡಲು ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಹೆಚ್ಚುವರಿಯಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಕಣ್ಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿದೆ.

ಮೈತ್ರಿ ಸೀಟು ಹಂಚಿಕೆಯಲ್ಲಿ ಮಹತ್ತರ ಬೆಳವಣಿಗೆಯಾಗಿದ್ದು, ನಾಲ್ಕೈದು ಸ್ಥಾನಕ್ಕೆ ಪೈಪೋಟಿ ನಡೆಸುತ್ತಿದ್ದ ಜೆಡಿಎಸ್ ಗೆ ಮೂರು ಸ್ಥಾನ ನೀಡಲು ನಿರ್ಧರಿಸಲಾಗಿದೆ. ಮಂಡ್ಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರ ಸ್ಪರ್ಧೆ ಬಹುತೇಕ ಖಚಿತವಾಗಿದೆ.

ಇನ್ನು ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದು, ಚಿಕ್ಕಬಳ್ಳಾಪುರ ಅಥವಾ ಕೋಲಾರ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಚರ್ಚೆ ನಡೆದಿದೆ. ಬಿಜೆಪಿ ಹೈಕಮಾಂಡ್‌ನದ್ದೇ ಅಂತಿಮ ನಿರ್ಧಾರವಾಗಲಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!