ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಮಾರಸ್ವಾಮಿ, ನಿಮ್ಮ ಅವಧಿಯಲ್ಲಿ ರಾಷ್ಟ್ರಧ್ವಜ ಹಾರಿಸೋಕೆ ಒಂದು ದಿನವೂ ರಾಮನಗರಕ್ಕೆ ಹೋಗಿಲ್ಲ. ಚನ್ನಪಟ್ಟಣಕ್ಕೂ ಹೋಗಿಲ್ಲ. ನಿನ್ನನ್ನು ರಾಮನಗರ, ಚನ್ನಪಟ್ಟಣದ ಜನ ಆಯ್ಕೆ ಮಾಡಿ ಕಳುಹಿಸಿಕೊಟ್ಟಿದ್ದರು ಒಂದು ದಿನವೂ ಹೋಗಿ ನೀನು ರಾಷ್ಟ್ರಧ್ವಜಕ್ಕೆ ಗೌರವ ಕೊಟ್ಟಿಲ್ಲ, ಕನ್ನಡ ಧ್ವಜಕ್ಕೂ ಗೌರವ ಕೊಟ್ಟಿಲ್ಲ ಎಂದು ಡಿಕೆ ಶಿವಕುಮಾರ್ ಏಕವಚನದಲ್ಲಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಇವರಿಗೆ ಅಳು ಬರುತ್ತೆ. ಯಾವುದಾದರೂ ಒಂದು ಗುರುತಿಸುವ ಕೆಲಸ ಚನ್ನಪಟ್ಟಣಕ್ಕೆ ಮಾಡಿರೋದನ್ನ ತೋರಿಸು. ಎಂಎಲ್‌ಎ ಆಗಿದ್ದಾಗ ಬಿಜೆಪಿ ಜೊತೆಗೆ ಸಂಪರ್ಕ ಇತ್ತು. ಗುರುತು ಮಾಡೋ ಕೆಲಸ ಮಾಡಬೇಕಿತ್ತಲ್ಲ. ಬರೀ ವೋಟಿಗಾಗಿ ಬಂದು ಮಾತನಾಡಬೇಡಿ.
ಅಭ್ಯರ್ಥಿಗೆ ಲಾಸ್ ಏನೂ ಆಗಿಲ್ಲ, ಅಭ್ಯರ್ಥಿಗೂ ಚನ್ನಪಟ್ಟಣಕ್ಕೂ ಸಂಬಂಧ ಇಲ್ಲ. ಅವರು ಸೋತಿದ್ದು ಮಂಡ್ಯ ಹಾಗೂ ರಾಮನಗರದಲ್ಲಿ. ನೀನು, ನಿನ್ನ ಧರ್ಮಪತ್ನಿ ಇದ್ದರೂ ಇಲ್ಲಿಗೆ ನೀನು ಏನು ಕೊಟ್ಟೆ? ಚನ್ನಪಟ್ಟಣಕ್ಕೆ ನೀನು ಏನು ಕೊಟ್ಟೆ ಎಂದು ಹೇಳಬೇಕು ಎಂದು ಡಿಕೆಶಿ ಆಗ್ರಹಿಸಿದ್ದಾರೆ.