ಸಿದ್ಧರಾಮಯ್ಯರನ್ನು ಹಣಿಯಲು ಎಚ್ಡಿಕೆ- ಡಿಕೆಶಿ ಒಟ್ಟಾಗಿದ್ದಾರೆ: ಜಗದೀಶ್ ಶೆಟ್ಟರ್

ಹೊಸಿಗಂತ ವರದಿ, ಹುಬ್ಬಳ್ಳಿ:
ಜನರನ್ನು ಪ್ರಚೋದನೆ ಮಾಡುವುದು ಅದೇ ಜನರು ತಿರುಗಿಬಿದ್ದಾಗ ಸರ್ಕಾರದ ಮೇಲೆ ಇಲ್ಲ ಸಲ್ಲದ ಆರೋಪ ಮಾಡುವುದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐದು ವರ್ಷ ಮುಖ್ಯ ಮಂತ್ರಿಯಾದವರು ಯಾವ ರೀತಿ ನಡೆದುಕೊಳ್ಳಬೇಕು ಎಂಬುದು ಅರ್ಥ ಮಾಡಿಕೊಳ್ಳಬೇಕು. ಮುಂದೆ ಆದರೂ ತಮ್ಮ ನಡುವಳಿಕೆ ಬದಲಾಯಿಸಿಕೊಳ್ಳಬೇಕು ಎಂದರು.
ಡಿ.ಕೆ ಶಿವಕುಮಾರ ಹಾಗೂ ಎಚ್.ಡಿ‌. ಕುಮಾರಸ್ವಾಮಿಯವರ ಗುರಿ ಸಿದ್ದರಾಮಯ್ಯನವರಾಗಿದ್ದಾರೆ. ಸಿದ್ದರಾಮಯ್ಯ ಅವರನ್ನು ಹಣಿಯುವ ಸಲುವಾಗಿ ಅವರಿಬ್ಬರು ಒಂದಾಗಿದ್ದಾರೆ. ಕಾಂಗ್ರೆಸ್ ನವರು ಮುಂದಿನ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ ಎಂದು ಹೇಳಿದರು.
ರಾಷ್ಟ್ರದಲ್ಲಿ ಸೋಳಿನ ನೋವು ಅನುಭವಿಸುತ್ತಿರುವ ಪಕ್ಷ ಕಾಂಗ್ರೆಸ್ ಆಗಿದೆ. ಪ್ರತಿಯೊಂದು ರಾಜ್ಯದಲ್ಲಿ ಅಧಿಕಾರ ಕಳೆದುಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ಮುಂದಿನ ದಿನದಲ್ಲಿ ಶೋಚನೀಯ ಸ್ಥಿತಿಗೆ ತಲಪುತ್ತಾರೆ ಎಂದು ತಿಳಿಸಿದರು.
ವೀರ ಸಾವರ್ಕರ್ ಬಗ್ಗೆ ಕೆಟ್ಟದಾಗಿ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ. ಮೊದಲು ಸಿದ್ದರಾಮಯ್ಯ ಅವರು ವೀರ ಸಾವರ್ಕರ್ ಅವರ ಇತಿಹಾಸ ತಿಳಿದುಕೊಳ್ಳಬೇಕು. ಅಲ್ಪಸಂಖ್ಯಾತರ ಓಲೈಸುವ ಸಲುವಾಗಿ ಹೇಳಿಕೆ ನೀಡುತ್ತಿದ್ದಾರೆ. ಈ ರೀತಿ ಮಾತನಾಡಿ ಸಮಾಜದಲ್ಲಿ ದ್ವೇಷ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ.
ಮೊಟ್ಟೆ ವಿಚಾರ:
ಯಾವುದೇ ಸಂಘಟನೆ ಹಾಗೂ ಪಕ್ಷ ಶಾಂತಿ ರೀತಿಯಾಗಿ ಪ್ರತಿಭಟನೆ ಮಾಡಬೇಕು. ಯಾರು ಸಹ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಮೊಟ್ಟೆ ತೂರಿದವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಈ ರೀತಿ ಪ್ರತಿಭಟನೆ ಮಾಡುವುದು ಸರಿಯಲ್ಲ. ಆದರೆ ಸಿದ್ದರಾಮಯ್ಯ ಅವರು ಒಂದು ಶಿಸ್ತುಬದ್ಧ ಚೌಕಟ್ಟು ಹಾಕಿಕೊಳ್ಳಬೇಕು. ಜನರದಲ್ಲಿ ಪ್ರಚೋದನೆ ಸೃಷ್ಟಿಸುವ ಕೆಲಸ ಬಿಡಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!