ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ತಮ್ಮ ಕುಟುಂಬ ಸಮೇತ ಹಾಸನಾಂಬೆ ದರುಶನ ಪಡೆದಿದ್ದಾರೆ. ಇಂದು ಪತ್ನಿ ಅನಿತಾ, ಸೊಸೆ ಹಾಗೂ ಮೊಮ್ಮಗನ ಜತೆ ಹಾಸನಾಂಬೆ ದರುಶನ ಪಡೆದರು.
ಈ ಸಂದರ್ಭದಲ್ಲಿ ಚನ್ನಪಟ್ಟಣದಲ್ಲಿ ಮಗನ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಈ ಚುನಾವಣೆಯಲ್ಲಿ ನಿಖಿಲ್ ಗೆಲುವಿಗಾಗಿ ಪ್ರಾರ್ಥಿಸಿದ್ದೇನೆ. ನನ್ನ ಮಗ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದಾನೆ. ಈ ಚುನಾವಣೆಯಲ್ಲಿ ನಿಖಿಲ್ಗೆ ಗೆಲುವು ಸಿಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದ್ದಾರೆ.