ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಮಾರಸ್ವಾಮಿ ಕೇಂದ್ರ ಮಂತ್ರಿ ಆದ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ ನಿರೀಕ್ಷೆಗಳೆಲ್ಲ ಹುಸಿಯಾಗಿವೆ ಎಂದು ಮಾಗಡಿ ಶಾಸಕ ಹೆಚ್‌ಸಿ ಬಾಲಕೃಷ್ಣ ಹೇಳಿದ್ದಾರೆ.
ನಾವು ಗ್ಯಾರಂಟಿ ಯೋಜನೆಗೆ ಅನುದಾನ ಕೊಟ್ಟಿದ್ದೇವೆ. ಕೇಂದ್ರ ಸಚಿವ ಕುಮಾರಸ್ವಾಮಿ ಕೃಷಿಗೆ ಅನುದಾನ ನೀಡಲಿ. ಅವರೇ ಅದರ ಕ್ರೆಡಿಟ್ ಕೂಡಾ ತೆಗೆದುಕೊಳ್ಳಲಿ. ಕೃಷಿಗೆ ವಿಶೇಷ ಅನುದಾನ ತರುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.