ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸಚಿವರಾಗಿ ನೇಮಕಗೊಂಡಿರುವ ರಾಜ್ಯದ ಸಂಸದರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆಯವರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಂಸತ್ ಭವನದಲ್ಲಿ ನಡೆಯುತ್ತಿರುವ 18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದ ನೂತನ ಸಂಸದರಿಗೆ ಹಂಗಾಮಿ ಸ್ಪೀಕರ್ ಭತೃಹರಿ ಮಹತಾಬ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಈ ವೇಳೆ ಮೂವರು ನೂತನ ಸಂಸದರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲ ಬಾರಿಗೆ ಸಂಸತ್ ಪ್ರವೇಶಿಸುತ್ತಿರುವ ಸೋಮಣ್ಣ ಅವರು, ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಸಂಸತ್ ಪ್ರವೇಶಿಸಿದರು.