ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಚ್.ಡಿ.ಕೆ ನಿವಾಸದಲ್ಲಿ ಮೈತ್ರಿ ಮುಖಂಡರ ಸಭೆ ನಡೆದಿದ್ದು. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಗಳನ್ನ ಗೆಲ್ಲೋ ನಿಟ್ಟಿನಲ್ಲಿ ಈ ಸಭೆ ನಡೆಸಲಾಗಿದೆ. ಸಭೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಜಿಲ್ಲಾ ಮುಖಂಡರು ಉಪಸ್ಥಿತರಿದ್ದರು. ಮಾಜಿ ಸಚಿವರಾದ ಕೆ.ಪಿ.ಯೋಗೇಶ್ವರ್, ಮುನಿರತ್ನ ಹಲವರು ಪಾಲ್ಗೊಂಡಿದ್ದ ಸಭೆಯಲ್ಲಿ ಚುನಾವಣೆ ಕುರಿತು ಚರ್ಚೆಗಳು ನಡೆದಿವೆ.
ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಕೊಡುವ ಸಾಧ್ಯತೆಯ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ ಖುದ್ದು ನಡ್ಡಾ ಅವರು ಮಂಗಳಾ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ್ದರಿಂದ ಚರ್ಚೆಗೂ ಕಾರಣವಾಗಿತ್ತು. ಲೋಕಸಭೆ ಚುನಾವಣೆ ದಿನಾಂಕದ ಸಾರ್ವತ್ರಿಕ ಘೋಷಣೆಗೂ ಮುನ್ನವೇ ಟಿಕೆಟ್ ಗಿಟ್ಟಿಸಿಕೊಂಡು ಗೆಲ್ಲುವ ತಂತ್ರ, ಕಸರತ್ತು ಶುರುವಾಗಿದೆ. ಆದರೆ ಹೈಕಮಾಂಡ್ ನಿರ್ಧಾರ ಏನಿದೆ ಅನ್ನೋದನ್ನ ಕಾದುನೋಡಬೇಕಿದೆ.