September 30, 2026
Wednesday, September 30, 2026
spot_img

ರೈಲ್ವೆ ಸಚಿವರನ್ನು ಭೇಟಿಯಾದ ಎಚ್‌ಡಿಕೆ, ರಾಜ್ಯಕ್ಕೆ ಇನ್ನೊಂದು ಹೈ-ಸ್ಪೀಡ್ ರೈಲ್ವೆ ಕಾರಿಡಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ರನ್ನು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಭೇಟಿಯಾಗಿದ್ದಾರೆ.

ದೆಹಲಿಯಲ್ಲಿ ಭೇಟಿ ನಡೆದಿದ್ದು, ಮಂಡ್ಯಕ್ಕೆ ಸಂಬಂಧಿಸಿದಂತೆ ಮೂಲಸೌಕರ್ಯ ವೃದ್ಧಿ ಹಾಗೂ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ.

ಈಗಾಗಲೇ ರಾಜ್ಯಕ್ಕೆ ಹೈ ಸ್ಪೀಡ್‌ ಕಾರಿಡಾರ್‌ನ್ನು ಘೋಷಣೆ ಮಾಡಲಾಗಿದೆ. ಜತೆಗೆ ಬೆಂಗಳೂರು-ಪುಣೆ ಹೈ ಸ್ಪೀಡ್‌ ರೈಲು ಕಾರಿಡಾರ್‌ ಕೂಡ ಸಿಗಲಿದೆ.

ಬೆಂಗಳೂರು-ಮುಂಬೈಗೆ ಹೊಸ ರೈಲು ಆರಂಭಿಸಲಾಗುವುದು ಎನ್ನುವ ಮಾಹಿತಿಯನ್ನು ರೈಲ್ವೆ ಸಚಿವರು ತಮಗೆ ಮಾಹಿತಿ ನೀಡಿದರು. ಬೆಂಗಳೂರು-ಪುಣೆ ಹೈ-ಸ್ಪೀಡ್ ರೈಲು ಕಾರಿಡಾರ್ ಹಾಗೂ ಬೆಂಗಳೂರು-ಮುಂಬೈ ನಡುವಿನ ಹೊಸ ರೈಲಿನಿಂದ ಕರ್ನಾಟಕಕ್ಕೆ ಮತ್ತಷ್ಟು ಅನುಕೂಲ ಆಗಲಿದೆ ಎಂದು ಹೆಚ್‌ಡಿಕೆ ತಿಳಿಸಿದರು.

ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯ, ಸಂಪರ್ಕ ಮತ್ತು ಸಾರ್ವಜನಿಕ ಸೇವಾ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರ ಜತೆ ನಡೆಸಿದ ಫ್ರಲಪ್ರದವಾಗಿತ್ತು ಎಂದು ಅವರು ಹೇಳಿದರು. ತಮ್ಮ ಮನವಿಗಳ ಬಗ್ಗೆ ಕೇಂದ್ರ ರೈಲ್ವೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Must Read