ಎಚ್‌ಡಿಕೆ, ಮೋದಿ ಅವರವರ ಕೆಲಸ ಮಾಡಲಿ ಸಾಕು, ಮೊಸರಲ್ಲಿ ಕಲ್ಲು ಹುಡುಕೋದು ಬೇಡ: ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಡವರಿಗೆ ಪಡಿತರ ಕಾರ್ಡ್, ಅಕ್ಕಿ, ಪಿಂಚಣಿ, ನಿವೇಶನ ನೀಡುವ ಆಶ್ರಯ ಯೋಜನೆ, ಉಳುವವನಿಗೆ ಭೂಮಿ ಸೇರಿದಂತೆ ಜನರಿಗೆ ಪ್ರಮುಖ ಯೋಜನೆ ಕೊಟ್ಟಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿಯಲ್ಲ. ನಮ್ಮ ಸರ್ಕಾರದಿಂದ ಬಡವರಿಗೆ ತೊಂದರೆಯಾಗುವುದಿಲ್ಲ, ರಾಜಕೀಯ ಮಾಡಲು ವಿರೋಧ ಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುತ್ತಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.

ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಕುಮಾರಸ್ವಾಮಿ ಅವರಿಗೆ ನಮ್ಮ ಸರ್ಕಾರದ ಮೇಲೆ ಟೀಕೆ ಮಾಡಲು ವಿಚಾರಗಳಿಲ್ಲ. ಅವರ ಕಾಲದಲ್ಲಿ ಏನೇನು ಅನ್ಯಾಯ ಮಾಡಬೇಕೋ ಮಾಡಿದ್ದಾರೆ. ಅವರ ಸರ್ಕಾರದ ಅವಧಿಯಲ್ಲಿ ಯಾವುದೇ ಬಡವರಿಗೆ ಸಹಾಯ ಮಾಡಲಿಲ್ಲ.ಅವರಿಗೆ ಬಡವರಿಗೆ ಒಂದು ಕಾರ್ಯಕ್ರಮ ಮಾಡಲು ಆಗುವುದಿಲ್ಲ.

ಕೆಲವು ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಆರ್ಥಿಕವಾಗಿ ಅನುಕೂಲವಾಗಿರುವವರು ಬಿಡಿಎಲ್ ಕಾರ್ಡ್ ಹೊಂದಿದ್ದಾರೆ. ಅಂತಹವರನ್ನು ಪರಿಶೀಲಿಸಲು ನಾವು ಮುಂದಾಗಿದ್ದೇವೆ. ಬಡವರು ಎಂದು ನಿರ್ಧರಿಸಲು ಕೇಂದ್ರ ಸರ್ಕಾರ ಮಾನದಂಡ ವಿಧಿಸಿದ್ದು, ಅದರ ಆಧಾರದ ಮೇಲೆ ನಾವು ತೀರ್ಮಾನ ಮಾಡುತ್ತೇವೆ. ಬಡವರ ಕಾರ್ಡ್ ರದ್ದಾಗಿದ್ದರೆ ಅದನ್ನು ಸರಿಪಡಿಸಿ ಮತ್ತೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ನಮ್ಮ ಸರ್ಕಾರ ತೀರ್ಮಾನಿಸಿದೆ. ಮೋದಿ ಹಾಗೂ ಎಚ್‌ಡಿಕೆ ಅವರವರ ಕೆಲಸ ಮಾಡಲಿ, ನಮ್ಮ ಕೆಲಸ ನಮಗೆ ಮಾಡಲು ಬಿಡಿ ಎಂದು ಹೇಳಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!