ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಭೇಟಿ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್ ಆಹ್ವಾನದ ಮೇರೆಗೆ ಹೆಚ್ ಡಿಕೆ, ನಿಖಿಲ್ ಕುಮಾರಸ್ವಾಮಿ ಬೆಳಗ್ಗೆಯೇ ಅಮಿತ್ ಶಾ ಮನೆಗೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.
ಅಮಿತ್ ಶಾ ಜೊತೆ ಮಹತ್ವದ ಚರ್ಚೆ ನಡೆಸಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸಿದ್ದಾರೆ.
ಈ ಮಹತ್ವದ ಸಭೆಯಲ್ಲಿ ಕುಮಾರಸ್ವಾಮಿ ಅವರು ಅಮಿತ್ ಶಾ ಬಳಿ ಜೆಡಿಎಸ್ ಗೆ ಕನಿಷ್ಠ ಮೂರು ಕ್ಷೇತ್ರಗಳನ್ನು ಬಿಟ್ಟು ಕೊಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ. ಇನ್ನೇನು ಚುನಾವಣೆ ಹತ್ತಿರ ಬರುತ್ತಿದ್ದು ಯಾರಿಗೆ ಯಾವ ಕ್ಷೇತ್ರ ಸಿಗಲಿದೆ ಎಂಬುದುದನ್ನು ಕಾದು ನೋಡಬೇಕಿದೆ.