ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರದ ನೂತನ ಎನ್ಡಿಎ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಇಂದು ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ಶನಿವಾರ ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿರುವ ಅವರು, ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಂತರ ವಿಧಾನಸೌಧಕ್ಕೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.
ನಂತರ ತಮ್ಮ ಲೋಕಸಭಾ ಕ್ಷೇತ್ರ ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿ ಸ್ವಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಕುಮಾರಸ್ವಾಮಿ, ಸಂಸದರ ಕಚೇರಿ ಉದ್ಘಾಟಿಸಲಿದ್ದಾರೆ.