ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಗಿಲ್ಲಿ ನಟನಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನೆ ತಿಳಿಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಎಚ್‌ಡಿಕೆ, ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿಯ ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿ ನಟನಿಗೆ (ಶ್ರೀ ನಟರಾಜ್) ಹೃದಯಪೂರ್ವಕ ಅಭಿನಂದನೆಗಳು ಎಂದಿದ್ದಾರೆ.
ಹಳ್ಳಿಯ ರೈತನ ಮಗನಾಗಿ ಹುಟ್ಟಿ ಕನ್ನಡಿಗರೆಲ್ಲರ ಮನಗೆದ್ದಿರುವ ಅವರಿಗೆ ಇನ್ನೂ ಹೆಚ್ಚಿನ ಕೀರ್ತಿ, ಹೆಸರು ಬರಲಿ ಎಂದು ಶುಭಹಾರೈಸುತ್ತೇನೆ. ಹಾಗೆಯೇ, ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ ಕುಮಾರಿ ರಕ್ಷಿತಾ ಶೆಟ್ಟಿ ಅವರಿಗೂ ಅಭಿನಂದನೆ ತಿಳಿಸಿದ್ದಾರೆ.
ಬಿಗ್ ಬಾಸ್ ಸೀಸನ್ 12ರ ವಿಜೇತರಾಗಿ ಗಿಲ್ಲಿ ನಟರಾಜ್ ಹೊರಹೊಮ್ಮಿದ್ದಾರೆ. ರಕ್ಷಿತಾ ಶೆಟ್ಟಿ ರನ್ನರ್ ಅಪ್ ಹಾಗೂ ಅಶ್ವಿನಿ ಗೌಡ 2ನೇ ರನ್ನರ್ ಅಪ್ ಆಗಿದ್ದಾರೆ. ಗಿಲ್ಲಿ ನಟನಿಗೆ 50 ಲಕ್ಷ ರೂ., ಕಾರು ಹಾಗೂ ಸುದೀಪ್ ಅವರ ಕಡೆಯಿಂದ 10 ಲಕ್ಷ ರೂ. ಬಹುಮಾನ ಸಿಕ್ಕಿದೆ.


