ಹೈವೋಲ್ಟೇಜ್ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ HDK ಆಯ್ಕೆ: ಬಿಜೆಪಿ ಅಧಿಕೃತ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲ ಕೆರಳಿಸಿದ್ದ ಪ್ರಶ್ನೆಗೆ ಕಡೆಗೂ ಉತ್ತರ ಸಿಕ್ಕಿದೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ‘ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕುಮಾರಣ್ಣ’ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ.

ಬಿಜೆಪಿ-ಜೆಡಿಎಸ್ ನಾಯಕತ್ವ ಸಭೆ ಬಳಿಕ ಬಿ.ವೈ.ವಿಜಯೇಂದ್ರ ಮಾತನಾಡಿ, ಜನರಿಗಾಗಿ ಪ್ರಾಣ ಕೊಟ್ಟ ಜನನಾಯಕ ಕುಮಾರಣ್ಣ ಸಂಸದರಾಗಬೇಕು. ರಾಜ್ಯದ 28 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ.

ಎರಡೂ ಪಕ್ಷಗಳ ಕಾರ್ಯಕರ್ತರು ಈ ತೀರ್ಮಾನಕ್ಕೆ ಒಪ್ಪಿದ್ದಾರೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಚುನಾವಣೆಯನ್ನು ಚುನಾವಣೆ ರೀತಿ ಮಾಡೋಣ. ರಾಜ್ಯದ ಮೊದಲ ಫಲಿತಾಂಶ ಮಂಡ್ಯದ್ದಾಗಿರಬೇಕು. ಕುಮಾರಸ್ವಾಮಿ ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಕೇಳಿಕೊಂಡರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!