ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೈತ್ರಿ ನಾಯಕರು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗ್ಯಾರಂಟಿಗಳಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳುವ ಮೂಲಕ ವಿವಾದವನ್ನು ತಮ್ಮ ಮೈ ಮೇಲೆ ಎಳೆದುಕೊಂಡಿದ್ದಾರೆ.
ಇದೀಗ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕೆ ಹೇಳಿಕೆಗೆ ರಾಜ್ಯಾದ್ಯಂತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಮತ್ತು ಎನ್ ಡಿಎ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಗ್ರಾಮದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು.
ಹಳ್ಳಿ ಹುಡುಗಿಯರ ಬಗ್ಗೆ ಯಾಕೆ ಹಗುರವಾಗಿ ಮಾತನಾಡಿದ್ದಾರೆ? ಕಾಂಗ್ರೆಸ್ ಸ್ವಾರ್ಥದಿಂದ ಯಾವ ಯೋಜನೆಯನ್ನು ಜಾರಿ ತರುವ ಉದ್ದೇಶ ಹೊಂದಿಲ್ಲ. ಬಿಜೆಪಿ ಮನಸ್ಥಿತಿಯ ಬಗ್ಗೆ ರಾಜ್ಯದ ಜನತೆಗೆ ಅರಿವಿದೆ. ಸುಳ್ಳು ಹೇಳುವುದೇ ಬಿಜೆಪಿಯ ಅಜೆಂಡಾ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.