ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಂಧಿ ಜಯಂತಿಯಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ ಪೌರ ಕಾರ್ಮಿಕರೊಂದಿಗೆ ಕಸ ಗುಡಿಸಿದ್ದಾರೆ.
ಇಂದು ಬೆಳಗ್ಗೆ ಕುಮಾರಸ್ವಾಮಿ ಬೆಂಗಳೂರಿನ ಹೆಚ್‌ಎಂಟಿ ಕ್ಯಾಂಪಸ್‌ನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯ ಸೆಂಟರ್ ಫಾರ್ ಎಕ್ಸಲೆನ್ಸಿಗೆ ಭೇಟಿ ನೀಡಿದರು. ಅಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು.
ಬಳಿಕ ಸ್ವಚ್ಛ ಭಾರತ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಹೆಚ್‌ಎಂಟಿ ಅಧ್ಯಕ್ಷ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಕೊಹ್ಲಿ, ಇತರೆ ಉನ್ನತ ಅಧಿಕಾರಿಗಳು ಹಾಗೂ ಎಕ್ಸಲೆನ್ಸಿ ಕೇಂದ್ರದ ಅನೇಕ ವಿಜ್ಞಾನಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.