Sunday, August 14, 2022

Latest Posts

ಪಶು ಚಿಕಿತ್ಸಾ ಕೇಂದ್ರ ಉದ್ಘಾಟನೆ ಮಾಡಲು ಅಲಂಕೃತ ಎತ್ತಿನ ಗಾಡಿ ಏರಿದ ಎಚ್‌ಡಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ರಾಮನಗರ :

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಎತ್ತಿನಗಾಡಿಯಲ್ಲಿ ತೆರಳಿ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಗ್ರಾಮದಲ್ಲಿ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರವನ್ನು ಇಂದು ಉದ್ಘಾಟನೆ ಮಾಡಿದರು.
ತಿಮ್ಮಸಂದ್ರ ಗ್ರಾಮದಲ್ಲಿ ಎತ್ತಿನಗಾಡಿ ಮೂಲಕ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಕರೆದುಕೊಂಡು ಹೋದ ಗ್ರಾಮಸ್ಥರು ಚನ್ನಪಟ್ಟಣ ತಾಲೂಕಿನಲ್ಲಿರುವ ಗ್ರಾಮದ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರವನ್ನು ಉದ್ಘಾಟನೆ ಮಾಡಿಸಿದರು. ಈ ವೇಳೆ ಎತ್ತಿನಗಾಡಿಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮೆರವಣಿಗೆ ಮಾಡಲಾಯಿತು.
ಅದಕ್ಕೂ ಮುನ್ನ ಚನ್ನಪಟ್ಟಣದಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿ ಕೃಷಿ ಅಭಿಯಾನಕ್ಕೆ ಕುಮಾರಸ್ವಾಮಿ ಚಾಲನೆ ನೀಡಿದರು. ಆ ವೇಳೆ ಸುಮಲತಾ ಕೆಆರ್​ಎಸ್ ಡ್ಯಾಂ ಬಗ್ಗೆ ಹೇಳಿಕೆ ವಿಚಾರವಾಗಿ ಸುದ್ದಿಗಾರರು ಮಾತನಾಡಿಸಿದಾಗ ದೊಡ್ಡವರ ವಿಚಾರ ನಮಗೆ ಬೇಡವೆಂದು ಕೈಮುಗಿದು ಯಾವುದೆ ಪ್ರತಿಕ್ರಿಯೆ ನೀಡಿದೆ ಕುಮಾರಸ್ವಾಮಿ ಹೊರಟರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss