ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಬೆನ್ನಿಗೇ ಸುಳ್ಯದಲ್ಲಿ ಕೆಲ ದಿನಗಳ ಹಿಂದೆ ಹತ್ಯೆಯಾದ ಮಸೂದ್ ಮನೆಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿದ್ದು, ಮನೆಮಂದಿಗೆ ಸಾಂತ್ವನ ಹೇಳಿದ್ದಾರೆ.
ಈ ಸಂದರ್ಭ ಅವರು ವೈಯಕ್ತಿಕವಾಗಿ 5 ಲಕ್ಷ ರೂಪಾಯಿ ನೆರವು ನೀಡಿದರು. ಕರಾವಳಿ ಜಿಲ್ಲೆಯಲ್ಲಿ ಹಂತಕರು ಎಷ್ಟೇ ಪ್ರಭಾವಿಗಳಾಗಿದ್ದರೂ ಸರಿ ಅವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಘಟನೆಗಳು ಮತ್ತೆಂದೂ ಮರುಕಳಿಸಬಾರದು ಎಂದು ಅವರು ಆಗ್ರಹಿಸಿದರು. ಮಸೂದ್ ಕುಟುಂಬಕ್ಕೆ ಪಕ್ಷದ ವತಿಯಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದರು.
ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಭೋಜೆ ಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಈ ಸಂದರ್ಭ ಉಪಸ್ಥಿತರಿದ್ದರು.