ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಗಮಂಗಲ ಗಲಭೆ ಪ್ರಕರಣ ಹಿನ್ನೆಲೆ ಇಂದು ಜಿಲ್ಲೆಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಲಿದ್ದು, ನೊಂದ ಕುಟುಂಬಗಳಿಗೆ ಧನ ಸಹಾಯ ಮಾಡಲು ಮುಂದಾಗಿದ್ದಾರೆ.
ನಾಗಮಂಗಲದಲ್ಲಿ ನಡೆದ ಗಲಭೆಯಿಂದಾಗಿ ಹಲವು ಬದುಕು ಬೀದಿಗೆ ಬಂದಿದೆ. ಈ ಸಂಬಂಧ ಸಚಿವ ಚೆಲುವರಾಯಸ್ವಾಮಿ ಹಾನಿಗೊಳಗಾದವರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವುದರ ಜೊತೆಗೆ ವೈಯಕ್ತಿಕವಾಗಿಯೂ ಪರಿಹಾರ ಕೊಡುವುದಾಗಿಯೂ ತಿಳಿಸಿದ್ದಾರೆ.
ಇತ್ತ ಕಡೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತಲ್ಲಿ ಹೇಳುವುದು ಬೇಡ ಮಾಡಿತೋರಿಸಬೇಕೆಂದು, ತಮ್ಮ ಸ್ವಂತ ಹಣದಲ್ಲಿ ನೊಂದ ಕುಟುಂಬಗಳಿಗೆ ಧನ ಸಹಾಯ ಮಾಡಲು ಮುಂದಾಗಿದ್ದಾರೆ. ಈ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ