ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಬೃಹತ್ ಕೈಗಾರಿಕಾ ಸಚಿವ, ಮಂಡ್ಯ ಸಂಸದ ಕುಮಾರಸ್ವಾಮಿ ಇಂದು ಬೆಳಗ್ಗೆ ನಾಗಮಂಗಲಕ್ಕೆ ಭೇಟಿ ನೀಡಿದರು.
ಗಲಭೆಯಿಂದ ಹಾನಿಗೊಳಗಾದ ಅಂಗಡಿಗಳಿಗೆ ಭೇಟಿ ನೀಡಿದ ಹೆಚ್‌ಡಿಕೆ ಅಂಗಡಿ ಮಾಲೀಕರ ಅಳಲು ಆಲಿಸಿದರು. ಭೇಟಿ ವೇಳೆ ಹೆಚ್‌ಡಿಕೆಗೆ ಮಾಜಿ ಶಾಸಕರಾದ ಸುರೇಶ್‌ಗೌಡ, ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ ಸಾಥ್ ನೀಡಿದರು.
ಘಟನೆ ನಡೆದ ಬುಧವಾರ ರಾತ್ರಿಯೇ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವೇ ನಾಗಮಂಗಲ ಗಲಭೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.