Monday, December 11, 2023

Latest Posts

ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ ಹೆಚ್‌ಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರುನಾಡಿನ ಹೆಮ್ಮೆಯ ಹಬ್ಬ ಕನ್ನಡ ರಾಜ್ಯೋತ್ಸವಕ್ಕೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಕನ್ನಡಿಗರಿಗೆ ಶುಭಾಶಯ ತಿಳಿಸಿದ್ದಾರೆ. `ನಾಡಿನ ಹಾಗೂ ಜಗತ್ತಿನೆಲ್ಲೆಡೆ ನೆಲೆಸಿರುವ ಸಮಸ್ತ ಕನ್ನಡ ಬಂಧುಗಳಿಗೆ 68ನೇ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಹಾಗೆಯೇ, ಮೈಸೂರು ರಾಜ್ಯ ‘ಕರ್ನಾಟಕ’ವೆಂದು ಹೆಸರಾಗಿ ಇಂದಿಗೆ 50 ವರ್ಷ. ಸಾಧಿಸಿದ್ದು ಸಾಕಷ್ಟು, ಸಾಧಿಸಬೇಕಾದದ್ದು ಬಹಳಷ್ಟು. ಕನಸು ನನಸುಗಳ ಈ ಮಹಾಯಾನದಲ್ಲಿ ಸಾರ್ಥಕ ಹೆಜ್ಜೆಗಳನ್ನು ಇಡುತ್ತಾ ಕನ್ನಡಾಂಬೆಯ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರೈಸೋಣ’.

ಪ್ರತಿ ಹೊಸಿಲಿನಲ್ಲಿಯೂ ಕನ್ನಡದ ನಂದಾದೀಪ ಬೆಳಗಲಿ, ಆ ಹೊನಲು ಜಗವೆಲ್ಲಾ ತುಂಬಿಕೊಳ್ಳಲಿ ಎಂದು ಆಶಿಸುತ್ತೇನೆ. ಎಂದು ಟ್ವೀಟ್‌ ಮೂಲಕ ಶುಭ ಕೋರಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!