ಎಚ್‌ಡಿಕೆ ಆರೋಗ್ಯ ಸ್ಥಿರ, ಇಂದು ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಮಿದುಳಿನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಆದರೆ ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಚ್‌ಡಿಕೆ ದಾಖಲಾಗಿದ್ದು, ಆಸ್ಪತ್ರೆ ಮುಖ್ಯಸ್ಥರಾದ ಡಾ. ಗೋವಿಂದಯ್ಯ ಯತೀಶ್ ಅವರು, ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ನೀಡಿದ್ದಾರೆ.

ಅಸ್ವಸ್ಥತೆ ಹಾಗೂ ಸ್ಪಷ್ಟವಾದ ಮಾತುಗಳನ್ನು ಆಡಲು ಸಾಧ್ಯವಾಗದ ಕಾರಣ ಎಚ್‌ಡಿಕೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಕ್ಷಣವೇ ಐಸಿಯುಗೆ ದಾಖಲಿಸಿ ನಂತರ ನರರೋಗ ತಜ್ಞರು ಚಿಕಿತ್ಸೆ ನೀಡಿದ್ದಾರೆ.

ಮೆದುಳಿನ ಬಲಭಾಗದಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಗುಣಮುಖರಾಗುತ್ತಿದ್ದಾರೆ, ಮಧ್ಯಾಹ್ನದ ನಂತರ ವಾರ್ಡ್‌ಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದು, ಇಂದು ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!