ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಮರಳಿದ ಎಚ್‌ಡಿಕೆ ಭರ್ಜರಿ ಸ್ವಾಗತ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಮರಳಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅದ್ದೂರಿ ಸ್ವಾಗತ ಕೋರಲಾಗಿದೆ.

ವಿಮಾನ ನಿಲ್ದಾಣದ ಬಿವಿಐಪಿ ಲಾಂಚ್‌ನಿಂದ ಕುಮಾರಸ್ವಾಮಿ ಬರುತ್ತಿದ್ದಂತೆ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸಚಿವರನ್ನು ಬರಮಾಡಿಕೊಳ್ಳಲು ಮುಗಿಬಿದ್ದರು. ಹೂ ಮಾಲೆ ಹಾಕಿ, ಪುಷ್ಪ ಗುಚ್ಛ ನೀಡಿ ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡರು. ಈ ವೇಳೆ ಸ್ಥಳದಲ್ಲಿ ತಳ್ಳಾಟ ನೂಕಾಟವಾಯಿತು.

ಸಿಐಎಸ್ಎಫ್ ಏರ್ಪೋರ್ಟ್ ಭದ್ರತಾ ಸಿಬ್ಬಂದಿ ಜೆಡಿಎಸ್ ಕಾರ್ಯಕರ್ತರನ್ನ ಚದುರಿಸಿದರು. ನಂತರ ಬೆಂಗಳೂರಿನತ್ತ ಹೊರಟ ಕುಮಾರಸ್ವಾಮಿ ಅವರಿಗೆ ವಿಮಾನ ನಿಲ್ದಾಣದ ಸಾದಹಳ್ಳಿ ಟೋಲ್ ಬಳಿ ಸಾವಿರಾರು ಮಂದಿ ಜೆಡಿಎಸ್ ಕಾರ್ಯಕರ್ತರು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಸ್ವಾಗತ ಕೋರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!