ಕರಾವಳಿಯಲ್ಲಿನ ಬೆಳವಣಿಗೆ ಸರ್ಕಾರದ ವೈಫಲ್ಯ ತೋರಿಸುತ್ತಿದೆ: ಹೆಚ್‌ಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರಾವಳಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಸರ್ಕಾರದ ವೈಫಲ್ಯ ತೋರಿಸುತ್ತಿದೆ ಎಂದು ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ನಡು ರಸ್ತೆಯಲ್ಲಿ ಹರಿದ ಪ್ರವೀಣ್ ನೆಟ್ಟಾರು ನೆತ್ತರು, ನಾಡಿನ ಆತ್ಮಸಾಕ್ಷಿಯನ್ನು ಕಲಕಿದೆ. ಒಂದೇ ಊರಿನಲ್ಲಿ ಎಂಟೇ ದಿನದಲ್ಲಿ 2 ಕೊಲೆ ನಡೆದಿವೆ ಎಂದರೆ ಈ ಸರಕಾರ ಬದುಕಿದೆಯಾ? ಸತ್ತಿದೆಯಾ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಧ್ಯಕ್ಷರು ಸೇರಿ ಸಚಿವರಿಬ್ಬರಿಗೆ ಎದುರಾದ ಪ್ರತಿರೋಧವೇ ಜನರ ತಾಳ್ಮೆ ಕಟ್ಟೆಯೊಡೆದಿದೆ ಎನ್ನುವುದಕ್ಕೆ ಸಾಕ್ಷಿ. ಕರಾವಳಿ ಕೆರಳಿದೆ. ಕರ್ನಾಟಕ ಕೆರಳುವುದು ಬಾಕಿ ಇದೆ ಎಂದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ರಾಜ್ಯ ಬಿಜೆಪಿ ಸರಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ. ಅಂತೂ ಪಾಪಪ್ರಜ್ಞೆ ಕಾಡಿತಲ್ಲ ಎನ್ನುವ ಸಮಾಧಾನ, ಸರಕಾರ ಮುಖ ಉಳಿಸಿಕೊಂಡಿದೆ. ʼಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ‌ ಎಂದು ಅವರು ಬರೆದುಕೊಂಡಿದ್ದಾರೆ.

ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರಕಾರಕ್ಕೆ ಕೇಳಿಸಿದ್ದಿದ್ದರೆ ಪ್ರವೀಣ್ ನೆಟ್ಟಾರು ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? ತಾಯಿಂದಿರ ಆರ್ತನಾದ ಸರಕಾರದ ಕಿವಿಗೆ ಇಂಪಾದ ʼನಾದʼದಂತೆ ಕೇಳುತ್ತಿವೆಯಾ? ಎಂದು ಅವರು ಪ್ರಶ್ನಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!