Wednesday, September 24, 2025

ಅಕ್ಷರ ಲೋಕದಲ್ಲಿ ಸರಸ್ವತೀ ಪುತ್ರ ಭೈರಪ್ಪ ಅಮರ


ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು (ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ. 

ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು.

94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದಾರೆ.

ಇದನ್ನೂ ಓದಿ