ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಮಧ್ಯಪ್ರದೇಶದ ಭೋಪಾಲ್ ಮತ್ತು ಇಂಧೋರ್ ವಿಮಾನ ನಿಲ್ದಾಣಗಳಿಂದ ವಿಮಾನಗಳನ್ನು ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಮಧ್ಯಪ್ರದೇಶದ ಶುಜಾಲ್ಪುರದವನು ಎಂಬುದು ವಿಚಾರಣೆಯಿಂದ ತಿಳಿದು ಬಂದಿದ್ದು, ಈ ಕುರಿತು ಮಾಹಿತಿ ನೀಡಿದ ಭೋಪಾಲ್ನ ಗಾಂಧಿನಗರ ಪೊಲೀಸ್ ಠಾಣೆಯ ಮುಖ್ಯ ಅಧಿಕಾರಿ ಅರುಣ್ ಶರ್ಮಾ, ರಾಜಾ ಭೋಜ್ ಏರ್ಪೋರ್ಟ್ಗೆ ಮಂಗಳವಾರ ಸಂಜೆ 5ಗಂಟೆಯ ಹೊತ್ತಿಗೆ ಅಪರಿಚಿತ ಕರೆಯೊಂದು ಬಂದಿತ್ತು. ವಿಮಾನ ಅಪಹರಣ ಮಾಡುವುದಾಗಿ ಬೆದರಿಕೆ ಹಾಕಿದ್ದ. ಏರ್ಪೋರ್ಟ್ನವರು ಕೂಡಲೇ ನಮಗೆ ಕರೆ ಮಾಡಿ ವಿಷಯ ತಿಳಿಸಿದರು. ನಾವು ಕಾಲ್ ಟ್ರೇಸ್ ಮಾಡಿ ಈತನನ್ನು ಪತ್ತೆಹಚ್ಚಿದ್ದೇವೆ. ವಿಚಾರಣೆಗಾಗಿ ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.
ಈತನಿಂದ ಕರೆ ಬಂದ ಬಳಿಕ ಮುಂಬೈಗೆ ಭೋಪಾಲ್ನಿಂದ ತೆರಳಿದ್ದ ವಿಮಾನವನ್ನು ಸರಿಯಾಗಿ ತಪಾಸಣೆ ಮಾಡಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನೂ ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.