ಎದೆ, ಹೊಟ್ಟೆ, ಸೊಂಟಕ್ಕೆ ಒದ್ದು, ಕೆನ್ನೆಗೆ ಹೊಡೆದಿದ್ದಾನೆ…ಪ್ಲೀಸ್‌ ಬಿಟ್ಟು ಬಿಡು ಅಂದ್ರೂ ಕೇಳಲಿಲ್ಲ: ಕೇಜ್ರಿವಾಲ್ ಆಪ್ತನ ವಿರುದ್ಧ ಸ್ವಾತಿ ಮಲಿವಾಲ್‌ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ಕನಿಷ್ಠ ಏಳರಿಂದ ಎಂಟು ಬಾರಿ ನನ್ನ ಕೆನ್ನೆಗೆ ಹೊಡೆದಿದ್ದಾನೆ ಎಂದು ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ (Swati Maliwal) ಗಂಭೀರ ಆರೋಪ ಮಾಡಿದ್ದಾರೆ.

ಸ್ವಾತಿ ಮಲಿವಾಲ್ ದೂರು ನೀಡಿದ್ದು ಎಫ್‍ಐಆರ್ ದಾಖಲಾಗಿದೆ. ಮೇ 13 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ದೌರ್ಜನ್ಯದ ಬಗ್ಗೆ ಎಳೆ ಎಳೆಯಾಗಿ ದೂರಿನಲ್ಲಿ ವಿವರಿಸಿದ್ದಾರೆ.

ಮೇ 13 ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಡ್ರಾಯಿಂಗ್ ರೂಮ್‍ನಲ್ಲಿ ಈ ಘಟನೆ ನಡೆದಿದೆ. ಘಟನೆಯ ಸಮಯದಲ್ಲಿ ಕೇಜ್ರಿವಾಲ್ ನಿವಾಸದಲ್ಲಿ ಇದ್ದರು ಎಂದುಸ್ವಾತಿ ಆರೋಪಿಸಿದ್ದಾರೆ. ಎಫ್‍ಐಆರ್‍ನಲ್ಲಿ ಕೇಜ್ರಿವಾಲ್ ಹೆಸರನ್ನು ಉಲ್ಲೇಖಿಸಿಲ್ಲ.

ಕೇಜ್ರಿವಾಲ್ ಅವರ ವೈಯಕ್ತಿಕ ಸಹಾಯಕ ಬಿಭವ್ ಕುಮಾರ್ (Bibhav Kumar) ನನಗೆ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ನಾನು ಎಷ್ಟೇ ಮನವಿ ಮಾಡಿಕೊಂಡರೂ ಪದೇ ಪದೇ ನನ್ನ ಹೊಟ್ಟೆ ಮತ್ತು ಸೊಂಟಕ್ಕೆ ಒದ್ದಿದ್ದಾನೆ.

ನಾನು ಡ್ರಾಯಿಂಗ್ ರೂಮಿನಲ್ಲಿ ಕುಳಿತಿದ್ದಾಗ ಬಿಭವ್ ಕುಮಾರ್ ಒಳಗೆ ಬಂದಿದ್ದಾನೆ. ಬಳಿಕ ಕಾರಣವಿಲ್ಲದೇ ನನ್ನ ವಿರುದ್ಧ ಕಿರುಚಾಡಲು ಹಾಗೂ ನಿಂದಿಸಲು ಪ್ರಾರಂಭಿಸಿದ್ದಾನೆ. ನೀವು ನಮ್ಮ ಮಾತನ್ನು ಯಾಕೆ ಕೇಳುವುದಿಲ್ಲ? ಕೆಟ್ಟ ಮಹಿಳೆ, ನಾವು ನಿಮಗೆ ಪಾಠ ಕಲಿಸುತ್ತೇವೆ ಎಂದೆಲ್ಲಾ ಬಾಯಿಗೆ ಬಂದಂತೆ ಬೈದಿದ್ದಾನೆ. ಇದಾದ ಬಳಿಕ ನನಗೆ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ಆಗ ನಾನು ಸಂಪೂರ್ಣವಾಗಿ ಆಘಾತಕ್ಕೊಳಗಾದೆ. ಕೂಡಲೇ ಸಹಾಯಕ್ಕಾಗಿ ಅಂಗಲಾಚಿದ್ದೇನೆ. ಈ ವೇಳೆ ಅವರು ನನ್ನ ಬಟ್ಟೆಯನ್ನು ಹಿಡಿದು ಎಳೆದುಕೊಂಡು ಹೋಗಿ ನನ್ನ ತಲೆಯನ್ನು ಮೇಜಿಗೆ ಹೊಡೆದಿದ್ದಾನೆ. ಈ ವೇಳೆ ನಾನು ಕೆಳಗೆ ಬಿದ್ದೆ. ನಾನು ಸಹಾಯಕ್ಕಾಗಿ ನಿರಂತರವಾಗಿ ಕಿರುಚಾಡಿದರೂ ಯಾರೊಬ್ಬರು ನನ್ನ ರಕ್ಷಣೆಗೆ ಬರಲಿಲ್ಲ.ನಾನು ಪದೇ ಪದೇ ಕಿರುಚಾಡಿದ್ರೂ ಬಿಭವ್ ನನ್ನ ಮೇಲೆ ಹಲ್ಲೆ ಮಾಡುವುದನ್ನು ಬಿಡಲಿಲ್ಲ. ನನ್ನ ಎದೆ, ಹೊಟ್ಟೆ ಹಾಗೂ ಸೊಂಟಕ್ಕೆ ಪದೇ ಪದೇ ಒದ್ದಿದ್ದಾನೆ. ನನ್ನ ಬಿಟ್ಟುಬಿಡುವಂತೆ ಅಂಗಲಾಚಿದ್ರೂ ಆತ ಕರುಣೆ ತೋರಲಿಲ್ಲ, ಪಶ್ಚಾತ್ತಾಪಡಲಿಲ್ಲ, ಬದಲಾಗಿ ನನ್ನ ಮೇಲೆ ದಾಳಿ ಮುದುವರಿಸಿದ್ದಾನೆ ಎಂದು ಮಲಿವಾಲ್ ದೂರಿನಲ್ಲಿ ಆರೋಪಿಸಿದ್ದಾರೆ.

ನಾನು ನೆಲಕ್ಕೆ ಬಿದ್ದಾಗ ನಿರಂತರವಾಗಿ ನನ್ನ ಹೊಟ್ಟೆ, ಎದೆ, ಬೆನ್ನಿಗೆ ಒದ್ದಿದ್ದಾನೆ. ಅಲ್ಲದೇ ನನ್ನನ್ನು ಕಾಲುಗಳನ್ನು ಹಿಡಿದು ನೆಲದಲ್ಲಿ ಎಳೆದಾಡಿದ್ದು, ಬಟ್ಟೆಯನ್ನ ಎಳೆದಾಡಿದ್ದಾನೆ. ನಾನು ಅವತ್ತು ಋತುಮತಿಯಾಗಿದ್ದೆ. ಹೊಟ್ಟೆ ಬಹಳ ನೋಯುತ್ತಿದೆ ದಯವಟ್ಟಿ ಬಿಟ್ಟು ಬಿಡು ಎಂದರೂ ಕೇಳದೇ ನನ್ನ ಹೊಟ್ಟೆ ಕಾಲುಗಳಿಂದ ಒದ್ದಿದ್ದಾನೆ ಎಂದು ಸ್ವಾತಿ ಹೇಳಿದ್ದಾರೆ.

ಈ ಆಧಾರದ ಮೇಲೆ ಪೊಲೀಸರು ವಿಭವ್‌ ಮೇಲೆ ಮಹಿಳೆಯ ಅತ್ಯಾಚಾರಕ್ಕೆ ಯತ್ನ, ಕ್ರಿಮಿನಲ್‌ ಉದ್ದೇಶ, ಉದ್ದೇಶಪೂರ್ವಕ ಹಲ್ಲೆ ಯತ್ನದ ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!