ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲ ದಿನಗಳ ಹಿಂದೆ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಮಾತನಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಈಗ ಅದರ ವಿರುದ್ಧ ತದ್ವಿರುದ್ಧ ಹೇಳಿಕೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಪತ್ರಕರ್ತರೊಬ್ಬರು ಪ್ರಶ್ನಿಸಿದಾಗ, ಅಧಿಕಾರ ಹಂಚಿಕೆ ಸೂತ್ರ ಇಲ್ಲ, ಏನೂ ಇಲ್ಲ ಎಂದು ಉತ್ತರಿಸಿದ್ದಾರೆ. ಅದರ ಬಗ್ಗೆ ಯಾರೂ ಬಹಿರಂಗವಾಗಿ ಮಾತನಾಡುವಂತಿಲ್ಲ. ರಾಜಕೀಯವಾಗಿ ಭಿನ್ನಾಭಿಪ್ರಾಯಗಳಿವೆ. ಅದಕ್ಕೆ ತಕ್ಕಂತೆ ಆಡಳಿತ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಅಧಿಕಾರ ಹಂಚಿಕೆ ಸೂತ್ರ ವಿಚಾರವಾಗಿ ಗೊಂದಲಗಳಿಗೆ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಆ ರೀತಿ ಯಾವುದೇ ಒಪ್ಪಂದ ಆಗಿಲ್ಲ ಎಂದಿದ್ದಾರೆ.