ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ದಾಟಲು ಹೊರಟಿದ್ದ ವೃದ್ಧೆಗೆ ವಾಹನವೊಂದು ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಮನಹಳ್ಳಿ ಬಸ್ ಡಿಪೋ ಬಳಿ ಅಪಘಾತ ಸಂಭವಿಸಿದ್ದು, ಚಾಲಕ ಗಾಡಿ ಸಮೇತ ಪರಾರಿಯಾಗಿದ್ದಾನೆ.
ಘಟನೆ ನಡೆದ ಸ್ಥಳದಲ್ಲಿ ಚೀಲವೊಂದು ಪತ್ತೆಯಾಗಿದ್ದು, ಮೃತಪಟ್ಟ ವೃದ್ಧೆ ಚಿಂದಿ ಆಯುವ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಚಾಲಕನಿಗಾಗಿ ಹುಡುಕಾಟ ನಡೆಸುತ್ತಿರುವ ಪೊಲೀಸರು ಸ್ಥಳದ ಸುತ್ತಮುತ್ತ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ಗಳಲ್ಲಿ ದಾಖಲಾಗಿರೋ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ವೃದ್ಧೆಯ ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.