ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಕೆಂಪು ಕೋಟೆಯ ಬಳಿ ಕಾರು ಸ್ಫೊಟ ಪ್ರಕರಣ ಸಂಬಂಧ ಈಗಾಗಲೇ ಶಂಕಿತ ಉಗ್ರ ವೈದ್ಯ ಉಮರ್‌ನ ತಾಯಿ ಹಾಗೂ ಆತನ ಇಬ್ಬರು ಸಹೋದರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಉಮರ್‌ನ ಅತ್ತಿಗೆ ಪ್ರತಿಕ್ರಿಯಿಸಿದ್ದು, ಆತಂಕ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತಾಡಿರುವ ಕುಟುಂಬಸ್ಥರು, ಡಾ.ಉಮರ್ ಫರಿದಾಬಾದ್‍ನಲ್ಲಿ 2-3 ವರ್ಷದಿಂದ ಇದ್ದ. ಆತ ಶ್ರೀನಗರದಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡಿದ್ದ. ಒಂದೆರಡು ತಿಂಗಳ ಹಿಂದೆ ಮನೆಗೆ ಬಂದು ಹೋಗಿದ್ದ. ದೆಹಲಿಯಲ್ಲಿ ನಡೆದ ಸ್ಫೋಟದಿಂದ ನಮಗೆ ಆಘಾತವಾಗಿದೆ ಎಂದಿದ್ದಾರೆ.
ಸೋಮವಾರ ರಾತ್ರಿ ಪೊಲೀಸರು ಮನೆಗೆ ಬಂದಿದ್ದರು. ಒಂದಿಷ್ಟು ಪ್ರಶ್ನೆಗಳನ್ನು ಕೇಳಿದ್ದರು. ಇಬ್ಬರು ಸಹೋದರರನ್ನ ಕರೆದುಕೊಂಡು ಹೋಗಿದ್ದಾರೆ. ಅವರ ಸಂಪರ್ಕ ಪ್ರಯತ್ನ ಪಟ್ಟರೂ ಸಿಗುತ್ತಿಲ್ಲ. ಫೋನ್ ರಿಂಗ್ ಆಗುತ್ತಿದೆ ಎಂದು ಹೇಳಿದ್ದಾರೆ.
ಉಮರ್ ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಶುಕ್ರವಾರ ನಾನು ಅವನೊಂದಿಗೆ ಮಾತನಾಡಿದ್ದೆ. ಉಮರ್ ಪುಸ್ತಕ ಪ್ರೇಮಿಯಾಗಿದ್ದ. ಮನೆಗೆ ಬಂದಾಗಲೆಲ್ಲಾ ಅಧ್ಯಯನ ಮಾಡಲು ನಮ್ಮನ್ನು ಒತ್ತಾಯಿಸುತ್ತಿದ್ದ.ಉಮರ್‌ನ ತಾಯಿ ಕುಟುಂಬವನ್ನು ಬಡತನದಿಂದ ಮುಕ್ತಗೊಳಿಸಲು ಶ್ರಮಿಸಿದ್ದರು. ಬಡತನದಿಂದ ಹೊರಬರಲು ಉಮರ್ ನಮ್ಮ ಏಕೈಕ ಭರವಸೆಯಾಗಿದ್ದ ಎಂದು ಅವರು ಭಾವುಕರಾಗಿದ್ದಾರೆ.

