ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪೊಲೀಸ್ ಅಧಿಕಾರಿಯಿಂದ ಗುಂಡಿನ ದಾಳಿಗೆ ಒಳಗಾಗಿದ್ದ ಒಡಿಶಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ನಬಾ ಕಿಶೋರ್ ದಾಸ್ ನಿಧನರಾಗಿದ್ದಾರೆ.
ಭುವನೇಶ್ವರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಚಿವರು ಕೊನೆಯುಸಿರೆಳೆದಿದ್ದಾರೆ.
ಇಂದು ಝಾರ್ಸುಗುಡಾ ಜಿಲ್ಲೆಯ ಗಾಂಧಿ ಚೌಕ್‌ನಲ್ಲಿ ಆರೋಗ್ಯ ಸಚಿವ ನಬಾ ದಾಸ್ ಮೇಲೆ ಎಎಸ್‌ಐ ಗುಂಡು ಹಾರಿಸಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ನಂತರ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಏರ್ ಆಂಬ್ಯುಲೆನ್ಸ್ ಮೂಲಕ ಭುವನೇಶ್ವರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೇರಿದಂತೆ ಅನೇಕರು ಸಚಿವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆದರೆ, ಅಪೋಲೋ ಆಸ್ಪತ್ರೆಯಲ್ಲೇ ಸಚಿವ ನಬಾ ದಾಸ್ ಕೊನೆಯುಸಿರೆಳೆದರು ಎಂದು ಅಪೋಲೋ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.