‘ಹೆಡ್ ಬುಷ್’ ಬಿಡುಗಡೆಗೆ ಮುಹೂರ್ತ ಫಿಕ್ಸ್​!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಭಿನಯದ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ನಟ ಡಾಲಿ ಧನಂಜಯ್ ಅವರು ಬೆಂಗಳೂರಿನ ಒಂದು ಕಾಲದ ಭೂಗತ ದೊರೆ ಡಾನ್‌ ಎಂ.ಪಿ ಜಯರಾಜ್‌ ಅವರ ಜೀವನಾಧಾರಿತ ಸಿನಿಮಾ‌ ಮಾಡುತ್ತಿರುವುದು ಸೌಥ್​ ಸಿನಿಮಾ ಇಂಡಸ್ಟ್ರಿಯಲ್ಲಿ ಸಖತ್​​ ಟಾಕ್ ಆಗುತ್ತಿದೆ. ಚಿತ್ರೀಕರಣ ಮುಗಿದಿರುವ ಹೆಡ್ ಬುಷ್ ಸಿನಿಮಾವನ್ನು ಅಕ್ಟೋಬರ್ 21ರ ದೀಪಾವಳಿ ಹಬ್ಬದಂದು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗುವುದೆಂದು ಚಿತ್ರತಂಡ ತಿಳಿಸಿದೆ.
ಈಗಾಗಲೇ ಡಾಲಿ ಧನಂಜಯ್ ಎಂ.ಪಿ ಜಯರಾಜ್ ಸ್ಟೈಲ್​ನಲ್ಲಿ ಸಿಗರೇಟ್ ಸೇದುವ ಪೋಸ್ಟರ್ ರಿಲೀಸ್​ ಆಗಿದೆ. ಬರಹಗಾರ ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಶೂನ್ಯ ನಿರ್ದೇಶಿಸುತ್ತಿದ್ದಾರೆ. 1970ರ ಬೆಂಗಳೂರಿನ ಭೂಗತ ಜಗತ್ತನ್ನು ಶೂನ್ಯ ಅವರು ಈ ಚಿತ್ರದಲ್ಲಿ ತೋರಿಸಲಿದ್ದಾರೆ. ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರನ್, ಲೂಸ್ ಮಾದ ಯೋಗಿ, ವಸಿಷ್ಠ ಎನ್. ಸಿಂಹ, ಡೈನಾಮಿಕ್ ಸ್ಟಾರ್ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಮುಂತಾದ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!