ದಾವಣಗೆರೆಯಲ್ಲಿ ಟ್ರ್ಯಾಕ್ಟರ್‌-ಬೈಕ್‌ ನಡುವೆ ಅಪಘಾತ: ಹೆಡ್ ಕಾನ್ಸಟೇಬಲ್ ಸಾವು

ಹೊಸದಿಗಂತ ವರದಿ ದಾವಣಗೆರೆ:

ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸಟೇಬಲ್ ಸಾವನ್ನಪ್ಪಿದ ಘಟನೆ ಗುರುವಾರ ನಗರದ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಬಳಿ ನಡೆದಿದೆ.

ಗುರುಮೂರ್ತಿ(45 ವರ್ಷ) ಮೃತ ಹೆಡ್ ಕಾನ್ಸಟೇಬಲ್. ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದಾಗ ಕೊಂಡಜ್ಜಿ ರಸ್ತೆಯಿಂದ ಹಳೇ ಪಿ.ಬಿ ರಸ್ತೆಯನ್ನು ಸಂಪರ್ಕಿಸುವ ಸಂಗೊಳ್ಳಿ ರಾಯಣ್ಣ ಫ್ಲೈ ಓವರ್ ಬಳಿ ಟ್ರ್ಯಾಕ್ಟರ್ ಡಿಕ್ಕಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಗುರುಮೂರ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕು ಇಟಗಿ ಗ್ರಾಮದವರಾದ ಗುರುಮೂರ್ತಿ ದಾವಣಗೆರೆಯ ವಿದ್ಯಾನಗರದಲ್ಲಿ ಪತ್ನಿ ರೇಖಾ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಸಿದ್ದಾರ್ಥ ಜೊತೆ ವಾಸವಿದ್ದರು. ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇರಿಸಲಾಗಿದೆ. ಪೂರ್ವ ವಲಯ ಐಜಿಪಿ ಡಾ.ರವಿಕಾಂತೇಗೌಡ, ಎಸ್ಪಿ ಉಮಾ ಪ್ರಶಾಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!