ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಭೀತಿ ಹೆಚ್ಚಾಗಿದ್ದು, ಈ ವೈರಸ್‌ಗೆ ಹೆಡ್‌ಕಾನ್ಸ್‌ಟೆಬಲ್ ಒಬ್ಬರು ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇದುವರೆಗೆ 11 ಮಂದಿ ಡೆಂಗ್ಯು ಜ್ವರದಿಂದ ಮೃತಪಟ್ಟಿದ್ದಾರೆ. ಇನ್‌ಫ್ಯಾಂಟ್ರಿ ರಸ್ತೆಯ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಿಸಿಆರ್‌ಬಿ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮಶೇಖರ್, ಡೆಂಗ್ಯು ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಇಲ್ಲಿಯವರೆಗೂ ರಾಜ್ಯದಲ್ಲಿ 19,923 ಡೆಂಗ್ಯೂ ಪ್ರಕರಣ ದಾಖಲಾಗಿ 20 ಸಾವಿರ ಸನಿಹದತ್ತ ಮುನ್ನುಗ್ಗುತ್ತಿದೆ. ರಾಜ್ಯದಲ್ಲಿ ಇದುವರೆಗೂ 10 ಜನ ಡೆಂಗ್ಯೂಗೆ ಬಲಿಯಾಗಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂರು ನಾಲ್ವರು, ಶಿವಮೊಗ್ಗದಲ್ಲಿ ಇಬ್ಬರು, ಹಾಸನದಲ್ಲಿ ಇಬ್ಬರು, ಧಾರವಾಡ ಮತ್ತು ಹಾವೇರಿಯಲ್ಲಿ ಒಂದೊಂದು ಸಾವಾಗಿದೆ. ಜೊತೆಗೆ ಪ್ರತಿನಿತ್ಯ ಮೂನ್ನೂರರ ಸನಿಹಕ್ಕೆ ಕೇಸ್ ದಾಖಲಾಗುತ್ತಿವೆ.