ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ದಂಧೆ ಬಯಲಿಗೆ ಬಂದ ಬೆನ್ನಲ್ಲೇ ಮತ್ತೊಂದು ಆಸ್ಪತ್ರೆಯಲ್ಲೂ ಭ್ರೂಣ ಹತ್ಯೆ ನಡೆಯುತ್ತಿರುವುದು ಇದೀಗ ಬೆಳಕಿಗೆ ಬಂದಿದೆ.
ಮೈಸೂರಿನ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ನಡೆಯುತ್ತಿರುವುದು ಪತ್ತೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಅಲ್ಲಿನ ಹೆಡ್ ನರ್ಸ್ ಉಷಾರಾಣಿ ಎಂಬಾಕೆಯನ್ನು ಬಂಧಿಸಲಾಗಿದೆ.
ಪುಟ್ಟರಾಜು ಎಂಬಾತ ಬ್ರೋಕರ್ ಮಾತಾ ಮತ್ತು ಚಾಮುಂಡೇಶ್ವರಿ ಆಸ್ಪತ್ರೆಗೆ ಗರ್ಭಿಣಿಯರನ್ನು ಕರೆದುಕೊಂಡು ಹೋಗುತ್ತಿದ್ದ, ಚಾಮುಂಡೇಶ್ವರಿ ಆಸ್ಪತ್ರೆ ನರ್ಸ್ ಉಷಾರಾಣಿ ಗರ್ಭಿಣಿಯರಿಗೆ ಅಬಾರ್ಷನ್ ಮಾಡುತ್ತಿದ್ದಳು. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಹೆಣ್ಣು ಭ್ರೂಣಲಿಂಗ ಪತ್ತೆ ಮಾಡಿ ಗರ್ಭಪಾತ ಮಾಡಿಸುತ್ತಿದ್ದ ಜಾಲವನ್ನು ಇತ್ತೀಚೆಗೆ ಭೇದಿಸಿದ ಪೊಲೀಸರು 10ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ದಂಧೆಗಳು ಬಯಲಾಗುತ್ತಿವೆ.