ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿ ಸಮೀಪ ಎರಡು ದ್ವಿಚಕ್ರ ವಾಹನಗಳು ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಮಪ್ಪ (55) ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದ ರಾಮಪ್ಪರ ತಲೆಯೇ ಚೂರಾಗಿತ್ತು. ದ್ವಿಚಕ್ರವಾಹನದಲ್ಲಿದ್ದ ಇತರ ಇಬ್ಬರು ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ.
ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹವನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ.