ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ಮೃತರನ್ನು ಡಿ ನಾಗಮ್ಮ, ರಾಮಾಂಜಿನಮ್ಮ, ಬಾಲಪೆದ್ದಯ್ಯ ಮತ್ತು ಬಿ ನಾಗಮ್ಮ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ರಸ್ತೆ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.