ಹೊಸದಿಗಂತ ವರದಿ ಯಲ್ಲಾಪುರ:
ಯಲ್ಲಾಪುರದಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಅಂಕೋಲಾದಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಇಡಗುಂದಿ ಹೈಸ್ಕೂಲ್ ಎದುರುಗಡ ಸಂಭವಿಸಿದೆ.
ಅಪಘಾತಕ್ಕೀಡಾದ ಬಸ್ಸು ಕುಮಟಾ ಡಿಪೋಗೆ ಸೇರಿದ್ದು, ಕೊಲ್ಲಾಪುರದಿಂದ ಕಾರವಾರಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
ಡಿಕ್ಕಿಯ ಪರಿಣಾಮ ಲಾರಿ ಚಾಲಕನಿಗೆ ಹಾಗೂ ಬಸ್ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.



