October 13, 2026
Tuesday, October 13, 2026
spot_img

ಲಾರಿ-ಸ್ಕೂಟಿ ಮುಖಾಮುಖಿ ಡಿಕ್ಕಿ: ಯುವಕ ಸ್ಥಳದಲ್ಲೇ ಸಾ*ವು, ಮತ್ತೋರ್ವನಿಗೆ ಗಂಭೀರ ಗಾಯ

ಹೊಸದಿಗಂತ ವರದಿ ರಾಮನಗರ:

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ಸರ್ವೀಸ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕೆಂಪನಹಳ್ಳಿ ಗೇಟ್ ಬಳಿ ನಡೆದಿದೆ.

ತಾಲೂಕಿನ ದಾರಾಪುರ ಗ್ರಾಮದ ನಿವಾಸಿ ನಿತಿನ್ (21) ಮೃತಪಟ್ಟ ಸವಾರ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಹಿಂಬದಿ ಸವಾರ ಸೇವಂತ್ ನನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಲಸ ಮುಗಿಸಿಕೊಂಡು ಯುವಕರಿಬ್ಬರೂ ಸ್ಕೂಟಿಯಲ್ಲಿ ವಾಪಸ್ ಮನೆಗೆ ತೆರಳುತ್ತಿದ್ದರು. ಈ ವೇಳೆ ಕೆಂಪನಹಳ್ಳಿ ಗೇಟ್ ಬಳಿಯ ಸರ್ವೀಸ್ ರಸ್ತೆಯಲ್ಲಿ ಎದುರಿನಿಂದ ಬಂದ ಲಾರಿಯೊಂದು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ನಿತಿನ್ ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read