ಶಿರಾಡಿಘಾಟ್ ನಲ್ಲಿ ರಾಜಹಂಸ-ಐರಾವತ ಬಸ್ ಗಳ ಮುಖಾಮುಖಿ ಡಿಕ್ಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ಬೆಂಗಳೂರು ಶಿರಾಡಿಘಾಟ್ ನಲ್ಲಿ ಸರಣಿ ಅಪಘಾತ ಸಂಭವಿಸಿದೆ. ರಾಜಹಂಸ ಹಾಗೂ ಐರಾವತ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಮತ್ತೊಂದು ಅಪಘಾತ ತಪ್ಪಿಸಲು ಹೋಗಿ ಟೆಂಪೊವೊಂದು ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್ ನಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅಪಘಾತ ಸಂಭವಿಸಿದೆ.

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತ ತಪ್ಪಿಸಲು ಹೋಗಿ ಟೆಂಪೊವೊಂದು ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ. ಅಪಘಾತದಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಿರಾಡಿಘಾಟ್ ನಲ್ಲಿ ಅಪಘಾತ ಹಿನ್ನೆಲೆಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಅಪಘಾತಕ್ಕೀಡಾದ ಬಸ್ ಹಾಗೂ ಟೆಂಪೊಗಳನ್ನು ತೆರವುಗೊಳಿಸುವ ಕಾರ್ಯಾಚಾರಣೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!