February 25, 2026
Wednesday, February 25, 2026
spot_img

ಸಾರಿಗೆ ಬಸ್-ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಹೊಸದಿಗಂತ ಔರಾದ್:

ತಾಲ್ಲೂಕಿನ ಗಣೇಶಪೂರ ಗ್ರಾಮದ ಬಳಿ ಶನಿವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಲ್ಲೂಕಿನ ಲಕ್ಷ್ಮಿನಗರ ನಿವಾಸಿ ಉಮಾಕಾಂತ ದಿಗಂಬರ (24) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ಶನಿವಾರ ಸಂಜೆ ಉಮಾಕಾಂತ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಔರಾದ್ ಕಡೆಯಿಂದ ಸಂಚರಿಸುತ್ತಿದ್ದರು. ಈ ವೇಳೆ ಗಣೇಶಪೂರ ಸಮೀಪ ಎದುರಿನಿಂದ ವೇಗವಾಗಿ ಬಂದ ಸಾರಿಗೆ ಸಂಸ್ಥೆಯ ಬಸ್ಸಿನ ಚಕ್ರದಡಿಯಲ್ಲಿ ಬೈಕ್ ಸಿಲುಕಿದೆ. ಅಪಘಾತದ ತೀವ್ರತೆಗೆ ಉಮಾಕಾಂತ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !