ಹೊಸದಿಗಂತ ವರದಿ, ವಿಜಯಪುರ:
ಸಾರಿಗೆ ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಪ್ರಯಾಣಿಕರು ಸಾವಿಗೀಡಾದ ಘಟನೆ ವಿಜಯಪುರ ತಾಲೂಕಿನ ಕವಲಗಿ ಗ್ರಾಮದ ಬಳಿ ನಡೆದಿದೆ.
ಸಿಂದಗಿ ಮಾರ್ಗವಾಗಿ ವಿಜಯಪುರಕ್ಕೆ ಬರುತ್ತಿದ್ದ ಸಾರಿಗೆ ಬಸ್ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಅಸುನೀಗಿದ್ದು, ಮೃತಪಟ್ಟವರ ಹೆಸರು, ವಿಳಾಸ ತಿಳಿದು ಬಂದಿಲ್ಲ.
ಈ ಅಘಾತದಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದು, ಇನ್ನು 15 ಪ್ರಯಾಣಿಕರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.