ಹೊಸದಿಗಂತ ವರದಿ, ಶ್ರೀರಂಗಪಟ್ಟಣ :
ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಟಿ.ಎಂ ಹೊಸೂರು ಗೇಟ್ ಗೌಡಹಳ್ಳಿ ಗೇಟ್ ಬಳಿಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ತಾಲೂಕಿನ ಗೌಡಹಳ್ಳಿ ಗ್ರಾಮದ ಶ್ರೀಧರ್ ಬಿನ್ ರಾಮಲಿಂಗೇಗೌಡ (35) ಹಾಗೂ ಶ್ರೀನಿವಾಸ ಅಗ್ರಹಾರ ಗ್ರಾಮದ ಪುನೀತ್ ಬಿನ್ ಲೋಕೇಶ್ (34) ಮೃತಪಟ್ಟವರು. ಯೋಗೇಶ್ ಮತ್ತು ದರ್ಶನ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.