ಸರ್ಕಾರಿ ಬಸ್‌ಗಳ ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚಿಕ್ಕಮಗಳೂರಿನ ಮೂಡಿಗೆರೆ (Mudigere) ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ 2 ಸರ್ಕಾರಿ ಬಸ್‌ಗಳ (Bus) ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಎರಡೂ ಬಸ್ಸಿನ ಚಾಲಕರ ಬೇಜವಾಬ್ದಾರಿ ಹಾಗೂ ಅತಿ ವೇಗವಾಗಿ ಬಸ್ಸನ್ನು ಚಲಾಯಿಸಿದ್ದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬಸ್‌ಗಳ ಮುಖಾಮುಖಿ ಡಿಕ್ಕಿಯಾದ ಸಂದರ್ಭದಲ್ಲೂ ಕೂಡ ಎರಡೂ ಬಸ್‌ನ ಡ್ರೈವರ್ ಸೀಟ್‌ನ ಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೀಗಾಗಿ ಎರಡೂ ಬಸ್ಸಿನ ಚಾಲಕರಿಗೆ ಗಂಭೀರ ಗಾಯಗಳಾಗಿವೆ. ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು 5 ಅಂಬುಲೆನ್ಸ್‌ಗಳಲ್ಲಿ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!