Tuesday, August 16, 2022

Latest Posts

ಅಪೋಲೋ ಆಸ್ಪತ್ರೆಯಿಂದ ಸಾಯಿ ಧರಮ್ ಹೆಲ್ತ್‌ಬುಲೆಟಿನ್: ಹೇಗಿದೆ ಆರೋಗ್ಯ ಸ್ಥಿತಿ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆಮಾಸ್ಕ್ ಧರಿಸಿಸಾಮಾಜಿಕ ಅಂತರ ಕಾಯ್ದುಕೊಳ್ಳಿಕೈಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿನೀವೂ ಸುರಕ್ಷಿತರಾಗಿರಿನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ಲೈನ್ ಡೆಸ್ಕ್:

ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಟಾಲಿವುಡ್ ನಟ ಸಾಯಿ ಧರಮ್ ತೇಜ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಯಿ ಧರಮ್ ಆರೋಗ್ಯದ ಕುರಿತು ಅಪೋಲೋ ಆಸ್ಪತ್ರೆ ಹೆಲ್ತ್‌ಬುಲೆಟಿನ್ ಬಿಡುಗಡೆ ಮಾಡಿದ್ದು, ಸಾಯಿ ಧರಮ್ ಆರೋಗ್ಯ ಸ್ಥಿರವಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂದಿನ 24 ಗಂಟೆಗಳ ಕಾಲ ಅವರ ಮೇಲೆ ನಿಗಾವಹಿಸಲಾಗುತ್ತದೆ. ಎಲ್ಲ ಅಂಗಾಂಗಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿದೆ. ನಾಳೆ ಮತ್ತೊಂದು ಹೆಲ್ತ್‌ಬುಲೆಟಿನ್ ಬಿಡುಗಡೆ ಮಾಡುವುದಾಗಿ ತಿಳಿಸಿದೆ.

ಹೈದರಾಬಾದ್‌ನ ಕೇಬಲ್ ಬ್ರಿಡ್ಜ್‌ನ ಬಳಿ ಧರಮ್ ಸಾಯಿಧರ್ಮ ತೇಜ್ ಅವರ  ಬೈಕ್ ಅಪಘಾತವಾಗಿದ್ದು, ಸ್ಥಳದಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದರು. ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss