ಹೊಸದಿಗಂತ ಆನ್ ಲೈನ್ ಡೆಸ್ಕ್:
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ 2 ನೇ ಬಾರಿ ಕೊರೋನಾ ಸೋಂಕು ಧೃಡವಾದ ಹಿನ್ನೆಲೆ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಿಎಂ ಆರೋಗ್ಯದ ಬಗ್ಗೆ ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಹೆಲ್ತ್ ಬುಲೆಟಿನ್ ಪ್ರಕಾರ, ಅವರ ಆರೋಗ್ಯ ಸ್ಥಿರವಾಗಿದೆ. ಅವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ. ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ. ಕೊರೋನಾಗೆ ಚಿಕಿತ್ಸೆ ಮುಂದುವರೆದಿದೆ. ಶೀಘ್ರದಲ್ಲೇ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ಹೇಳಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವ್ರಿಗೆ 2ನೇ ಬಾರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ರಾಮಯ್ಯ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.